ಉಡುಪಿ: ಖಾಸಗಿ ಬಸ್‌ ಡಿಕ್ಕಿ ಡಿಕ್ಕಿ: ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದಾರುಣ ಸಾವು!

 


ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಬಿಜೆಪಿ‌ ಮುಖಂಡ ಮಂಜುಕೊಳ ಅವರ ಪತ್ನಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಎಂದು ಗುರುತಿಸಲಾಗಿದೆ.

ಮಾಹಿತಿ ತಿಳಿದು ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.