ಮಲ್ಪೆ: ಮಲ್ಪೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಒಂದು ತಿಂಗಳ ಬಳಿಕ ಕಾರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಜೂ. 14 ರಂದು ಅಚ್ಯುತ ಅವರು ಅಂಬಲಪಾಡಿ ಕಪ್ಪೆಟ್ಟು ಬಳಿ ಮಗುವನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಬರುವಾಗ ಕಾರು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅವರು ಮಲ್ಪೆ ಠಾಣೆಯಲ್ಲಿ ಹಿಟ್ ಆ್ಯಂಡ್ ರನ್ ದೂರು ದಾಖಲಿಸಿದ್ದರು.
ಖಚಿತ ಮಾಹಿತಿಯ ಮೇರೆಗೆ ಮಂಗಳವಾರ ಮಲ್ಪೆ ಠಾಣಾಧಿಕಾರಿ ಅನಿಲ್ ಕುಮಾರ್ ಮತ್ತು ಸಿಬಂದಿ ಆದರ್ಶ, ಕುಬೇರ ಅವರು ಆರೋಪಿಯನ್ನು ಬಂಧಿಸಿ ಕಾರನ್ನು ವಶಪಡಿಸಿಕೊಂಡಿದ್ದಾರೆ.
