ಗಂಗೊಳ್ಳಿ: ಅಲೆಗಳ ಅಬ್ಬರಕ್ಕೆ ಮುಳುಗಿದ ಪರ್ಸಿನ್ ಬೋಟ್; ಹಲವು ಮೀನುಗಾರರ ರಕ್ಷಣೆ

 


ಕುಂದಾಪುರ : ಗಂಗೊಳ್ಳಿ ಧಕ್ಕೆಯಿಂದ ಮಧ್ಯಾಹ್ನ ಬಳಿಕ ಮೀನುಗಾರಿಕೆಗೆ ತೆರಳಿದ ಶ್ರೀ ಬಾಲಾಂಜನೇಯ ಹೆಸರಿನ ಪರ್ಶಿನ್ ಮೀನುಗಾರಿಕಾ ಬೋಟೊಂದು ಧಕ್ಕೆಯ ಅನತಿ ದೂರದಲ್ಲಿ ಅಳಿವೆಯ ಸಮೀಪವೇ ಮುಳುಗಡೆಯಾಗಿದೆ. ಕೂಡಲೇ ಕಾರ್ಯಚರಣೆಗೆ ಇಳಿದ ಸಮೀಪದಲ್ಲಿದ್ದ ಬೋಟುಗಳ ಮೀನುಗಾರರು ಹಾಗೂ ಕರಾವಳಿ ಕಾವಲು ಪಡೆಯ ಸಿಬಂದಿಗಳು ಬೋಟಿನಲ್ಲಿದ್ದ 27 ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಬೋಟಿನ ತಳಭಾಗದ ಹಲಗೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವುದು ಬೋಟು ತ್ವರಿತವಾಗಿ ಮುಳುಗಲು ಕಾರಣವೆನ್ನಲಾಗಿದೆ.ಅವಘಡದಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದ್ದಾಗಿ ತಿಳಿದುಬಂದಿದೆ.