ಹೊಸದಿಲ್ಲಿ: ದೇಶಾದ್ಯಂತ NEET ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ
ರದ್ದುಗೊಳಿಸಿದೆ. ಸಂವಿಧಾನದ ಅನುಚ್ಛೇದ 142ರ ಅಡಿಯಲ್ಲಿ ನೀಡಿರುವ ವಿಶೇಷ ಅಧಿಕಾರವನ್ನು ಬಳಸಿಕೊಂಡು ನ್ಯಾಯಾಲಯ ಈ ಆದೇಶ ನೀಡಿದೆ.
ಆದರೆ, ಗಂಭೀರ ಕ್ರಿಮಿನಲ್ ಹಿನ್ನೆಲೆ ಹೊಂದಿರುವ 2,873 ವ್ಯಕ್ತಿಗಳ ವಿರುದ್ಧ ಹೊಸದಾಗಿ ಎಫ್‌ಐಆರ್‌ಗಳನ್ನು ದಾಖಲಿಸಲು ದಿಲ್ಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಇದಲ್ಲದೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 3 ತಿಂಗಳೊಳಗೆ ಪರಿಹಾರ ನೀಡುವಂತೆಯೂ ಸುಪ್ರೀಂ ಕೋರ್ಟ್ ಸರಕಾರಕ್ಕೆ ಸೂಚಿಸಿದೆ.
