ಉಡುಪಿ: ಸೋಮವಾರದಂದು ಕಮಲ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬೈ, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ, ರೋಟರಿ ಮಣಿಪಾಲ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ-ಕರಾವಳಿ ಹಾಗೂ ಉಡುಪಿ ಸೀನಿಯರ್ ಸಿಟಿಜನ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಲ್ಜೈಮರ್ಸ್ ದಿನ-2026 ರ ಅಂಗವಾಗಿ "ಅರಿವು ಮತ್ತು ತಡೆಗಟ್ಟುವಿಕೆ" ಎಂಬ ಆಶಯದೊಂದಿಗೆ ವಿಶೇಷ ಜಾಗೃತಿ ಕಾರ್ಯಕ್ರಮ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿಯ ಐ ಎಂ ಎ ಭವನ ದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಖ್ಯಾತ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರಾದ ಡಾ. ಗಿರಿಜಾ ರಾವ್, ಸೋನಿಯಾ ಕ್ಲಿನಿಕ್ ಮತ್ತು ನರ್ಸಿಂಗ್ ಹೋಂ, ಮಣಿಪಾಲ ಇವರು ಜ್ಞಾನದ ಸಂಕೇತವಾದ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ-ಕರಾವಳಿಯ ಅಧ್ಯಕ್ಷರಾದ ಡಾ. ಅಶೋಕ್ ಕುಮಾರ್ ಮತ್ತು ಉಡುಪಿ ಸೀನಿಯರ್ ಸಿಟಿಜನ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ ಮುರಳೀಧರ್ ಹಾಗೂ ರೊಟೇರಿಯನ್ ನಹುಶ ಶೆಟ್ಟಿ ಕಾರ್ಯದರ್ಶಿ, ರೋಟರಿ ಕ್ಲಬ್ ಮಣಿಪಾಲ ಉಪಸ್ಥಿತರಿದ್ದು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎ.ವಿ. ಬಾಳಿಗಾ ಚಾರಿಟೀಸ್ ಹಾಗೂ ಕಮಲ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬೈ ಇದರ ಟ್ರಸ್ಟಿಗಳಾದ ಡಾ. ಆರ್.ವಿ. ಬಾಳಿಗಾ ವಹಿಸಿದ್ದರು. ಅವರು ಅಧ್ಯಕ್ಷೀಯ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಮನಶಾಸ್ತ್ರಜ್ಞರಾದ ಶ್ರೀ ವಿಶ್ವೇಶ್ವರ ಹೆಗಡೆ ಅವರು ಪ್ರಾರ್ಥನೆ ನೆರವೇರಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಆಪ್ತ ಸಮಾಲೋಚಕರಾದ ಶ್ರೀ ಅಕ್ಷಯ್ ಅವರು ಧನ್ಯವಾದ ಸಮರ್ಪಣೆ ಮಾಡಿದರು. ಆಪ್ತ ಸಮಾಲೋಚಕರಾದ ಶ್ರೀಮತಿ ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾಗಿರುವ ಡಾ ಪಿ ವಿ ಭಂಡಾರಿ ಹಾಗೂ ಆಸ್ಪತ್ರೆಯ ಮನೋವೈದ್ಯರುಗಳಾದ ಡಾ. ವಿರುಪಾಕ್ಷ ದೇವರಮನೆ ಮತ್ತು ಡಾ ದೀಪಕ್ ಮಲ್ಯ ಹಾಗೆಯೇ ಆಪ್ತ ಸಮಾಲೋಚಕರಾಗಿರುವ ಶ್ರೀಮತಿ ಪದ್ಮ ರಾಘವೇಂದ್ರ ಇವರು ಆಲ್ಝೈಮರ್ಸ್ ಕಾಯಿಲೆಯ ಕುರಿತಾಗಿ ಉಪನ್ಯಾಸವನ್ನು ನೀಡಿದರು. ಉಡುಪಿ ಸೀನಿಯರ್ ಸಿಟಿಜನ್ ಅಸೋಸಿಯೇಷನ್ ನ ಸದಸ್ಯರು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು














