ವೃದ್ದನ ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚನೆ

IMG-20260720-WA0035-4 ಉಡುಪಿ ಉಡುಪಿ: ಅಲೆವೂರು ಯೂನಿಯನ್ ಬ್ಯಾಂಕ್ ಶಾಖೆಯ ಗ್ರಾಹಕರೊಬ್ಬರ ಖಾತೆಯಿಂದ ಅವರ ಗಮನಕ್ಕೆ ಬಾರದಂತೆ ₹4.40 ಲಕ್ಷ ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ ವಂಚಿಸಿರುವ ಘಟನೆ ನಡೆದಿದೆ. ಅಲೆವೂರು ನಿವಾಸಿ ವಿಠಲ (76) ಅವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಲೆವೂರು ಶಾಖೆಯಲ್ಲಿ ₹6 ಲಕ್ಷ ಹಣ ಇರಿಸಿದ್ದರು. ಈ ಹಣವನ್ನು ಬ್ಯಾಂಕ್ ಆಫ್ ಬರೋಡಾ ಖಾತೆಗೆ ವರ್ಗಾಯಿಸುವ ಉದ್ದೇಶದಿಂದ ಜೂ.22ರಂದು ಬ್ಯಾಂಕ್‌ಗೆ ತೆರಳಿ ಉಪಶಾಖಾಧಿಕಾರಿಗೆ ಮಾಹಿತಿ ನೀಡಿ, ಅಗತ್ಯ ದಾಖಲೆಗಳಿಗೆ ಸಹಿ ಮಾಡಿ ತೆರಳಿದ್ದರು. ಬಳಿಕ ಕಾರಣಾಂತರಗಳಿಂದ ಮಗಳ ಮನೆಗೆ ವಿಶಾಖಪಟ್ಟಣಕ್ಕೆ ತೆರಳಿದ್ದ ಅವರು, ಸೆ.8ರಂದು ಪುನಃ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ, ಅವರ ಉಳಿತಾಯ ಖಾತೆಯಿಂದ ₹4.40 ಲಕ್ಷ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಜೂ.15ರಂದು ಅಪರಿಚಿತರು ಅವರ ಗಮನಕ್ಕೆ ಬಾರದಂತೆ ಖಾತೆಯಿಂದ ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 121/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 318(4) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 66(D) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.