ಉಡುಪಿ, ಸೆ. 2: ಬದಲಾಗುತ್ತಿರುವ ವಾಣಿಜ್ಯ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ವಿದ್ಯಾರ್ಥಿಗಳು ವೃತ್ತಿಪರ ಕೌಶಲ್ಯಗಳೊಂದಿಗೆ ನಾಯಕತ್ವ ಮತ್ತು ಉದ್ಯಮಶೀಲತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಮಣಿಪಾಲದ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಚಿನ್ ಆರ್. ಚಂದ್ರ ಹೇಳಿದರು.
ಅವರು ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ‘ವಾಣಿಜ್ಯ ಮತ್ತು ನಿರ್ವಹಣಾ ಸಂಘ’ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿಕೇತನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣ ಭಟ್ ಹಾಗೂ ಐಕ್ಯೂಎಸಿ ಸಂಚಾಲಕರಾದ ಪ್ರೊ. ಶ್ರೀಮತಿ ಅಡಿಗ ಉಪಸ್ಥಿತರಿದ್ದರು.
ಸಂಘವು ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಜ್ಞಾನ, ನಾಯಕತ್ವ ಗುಣ, ಸಂವಹನ ಕೌಶಲ್ಯ, ತಂಡದ ಮನೋಭಾವ ಹಾಗೂ ಉದ್ಯಮಶೀಲ ಚಿಂತನೆ ಬೆಳೆಸುವ ನಿಟ್ಟಿನಲ್ಲಿ ವಿವಿಧ ಶೈಕ್ಷಣಿಕ ಮತ್ತು ಸಹಪಠ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿಕೇತನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣ ಭಟ್ ಹಾಗೂ ಐಕ್ಯೂಎಸಿ ಸಂಚಾಲಕರಾದ ಪ್ರೊ. ಶ್ರೀಮತಿ ಅಡಿಗ ಉಪಸ್ಥಿತರಿದ್ದರು. ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ಡಾ. ರವೀಶ ಬಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಮೀಕ್ಷಾ ನಿರೂಪಿಸಿದರು. ಭವ್ಯಶ್ರೀ ಪ್ರಾರ್ಥಿಸಿದರು. ಸಂಚಿತಾ ವಂದಿಸಿದರು.

