ಉಡುಪಿ: ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಗಸ್ತು ಅರಣ್ಯ ಪಾಲಕರ ಸಂಘ ಇವರ ಜಂಟಿ ಆಶ್ರಯದಲ್ಲಿ ಅರಣ್ಯ ಹುತಾತ್ಮರ ದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಉಡುಪಿಯ ಐಎಂಎ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುದ್ರನ್ ಪಿ., ಭಾ.ಅ.ಸೇ. ಉದ್ಘಾಟಿಸಿದರು. ಉಪ ವಲಯ ಅರಣ್ಯ ಅಧಿಕಾರಿಗಳ ಸಂಘದ ಉಡುಪಿ ಜಿಲ್ಲಾಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು.
ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೇಶವ ಪೂಜಾರಿ ಎಂ. ಗೌರವ ಉಪಸ್ಥಿತಿಯಲ್ಲಿ ಸಾಯಿರಾಧಾ ಗ್ರೂಪ್ ಉಡುಪಿ ವ್ಯವಸ್ಥಾಪಕ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್ , ಐಎಂಎ ಉಡುಪಿ ಅಧ್ಯಕ್ಷ ಡಾ. ಅಶೋಕ್ ಕಾಮತ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್., ಸಿದ್ದಾಪುರ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಡಿ. ದಿನೇಶ್, ಸರ್ಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ದಿನಕರ್ ಶೆಟ್ಟಿ ಅಂಪಾರು ಹಾಗೂ ವಲಯ ಅರಣ್ಯಾಧಿಕಾರಿಗಳ ಸಂಘದ ಬೆಂಗಳೂರು ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಅತಿಥಿಗಳಾಗಿ ಭಾಗವಹಿಸಿದರು.
ಜಿಲ್ಲಾ ಆಸ್ಪತ್ರೆ ಉಡುಪಿಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ ಸೇರಿದಂತೆ ಸಂಘದ ಪದಾಧಿಕಾರಿಗಳಾದ ರವಿ, ಕರುಣಾಕರ ಜೆ. ಆಚಾರ್ಯ,ನಾಗರಾಜ್ ,ಜಿ.ಕೃಷ್ಣಪ್ಪ ,ಹುಗ್ರಪ್ಪ ಗೌಡ ,ರಾಘವೇಂದ್ರ ಶೆಟ್ಟಿ ,ಜಯರಾಮ ಎ,ಮಂಜು ಗಾಣಿಗ ,ಅವಿನಾಶ,ಗಣೇಶ್ ದೇವಾಡಿಗ ,ವಿನಯ ಜಿ.ನಾಯಕ್ ಗೋವಿಂದ ಎಂ. ಪಟಗಾರ್, ಮಹಾಂತೇಶ್ ಎಚ್.ಜಿ., ರಾಮಚಂದ್ರ ನಾಯ್ಕ, ಶೃುತಿ ಶೇಖರ ಗೌಡ, ಮಹೇಶ್ ಎಸ್. ಮಲ್ಲಾಡದ್ ಹಾಗೂ ಸಂತೋಷ್ ಜೋಗಿ , ಶ್ರೀನಿವಾಸ್ ಜೋಗಿ ಮತ್ತು ಮಾಜಿ ಅಧ್ಯಕ್ಷರುಗಳಾದ ಕೆ.ಭಾಸ್ಕರ ,ಪ್ರಕಾಶ್ ಚಂದ್ರ ,ಜೀವನ್ ದಾಸ್ , ಹಿರಿಯ ಗೌರವ ಸಲಹೆಗಾರ ಸುರೇಶ್ ಗಾಣಿಗ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅರಣ್ಯ ರಕ್ಷಣೆಯಲ್ಲಿ ಮಡಿದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು. ಒಟ್ಟು 175ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಿಸಿ ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು.ಶಿಬಿರದಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.





