ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ಕೊಪ್ಪಳ ಜಿಲ್ಲೆಯ ಅಶೋಕ (42) ಎಂಬವರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಕಣ್ಮರೆಯಾಗಿದ್ದಾರೆ.ಅವರು ಜಯಗಣೇಶ್ ಎಂಬ ಮೀನುಗಾರಿಕಾ ಬೋಟಿನಲ್ಲಿ ಮಲ್ಪೆಯಿಂದ ಕಾಪು ಕಡೆಗೆ ಹೊರಟಿದ್ದರು. ರಾತ್ರಿ ವೇಳೆಗೆ ಬೋಟಿನಲ್ಲಿ ಕೆಲಸ ಮಾಡಿಕೊಂಡಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
