ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಹತ್ಯೆ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿ – ಪೊಲೀಸ್ ಸ್ಪಷ್ಟೀಕರಣ



ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದು, ಎಂಬ ವರದಿಗಳು ಕೆಲವು ಸ್ಥಳೀಯ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.

ಆದರೆ, ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್ ವತಿಯಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಲಭ್ಯವಾಗಿರುವುದಿಲ್ಲ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾಹಿತಿ ಉಡುಪಿ ಜಿಲ್ಲಾ ಪೊಲೀಸರಿಗೆ ಲಭ್ಯವಾದಲ್ಲಿ, ಅದನ್ನು ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.