ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ವತಿಯಿಂದ ಶನಿವಾರ ಆರಂಭಗೊಂಡ 80ನೇ ದಕ್ಷಿಣ ವಲಯ ಅಂತರ ರಾಜ್ಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ರಿಜ್ವಾನ್ ಅರ್ಷದ್ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಕೆ.ಗೋವಿಂದರಾಜ್ ಚಾಲನೆ ನೀಡಿದರು.
ಈ ವೇಳೆ ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಕುಮಾರ್ ಬಂಗಾರಪ್ಪ, ಕೆಬಿಎ ಕಾರ್ಯದರ್ಶಿ ಮುರಳೀಧರ್.ವಿ ಉಪಸ್ಥಿತರಿದ್ದರು.

