ಉಡುಪಿ: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

 


ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮೀ ಹಾಗೂ ತಾಲೂಕು ಪಂಚಾಯತ್‌ನ ವ್ಯವಸ್ಥಾಪಕಿ ಹಾಗೂ ಸಹಾಯಕ ನಿರ್ದೇಶಕಿ (ಪ್ರಭಾರ) ಫರ್ಝಾನಾ ಎಂ ಅವರ ಉಪಸ್ಥಿತಿಯಲ್ಲಿ ಮಾಸಿಕ ಸಭೆಯು ತಾ. 14.10.2026ರಂದು ಬೆಳಿಗ್ಗೆ 11.00 ಗಂಟೆಯಿಂದ ಉಡುಪಿ ತಾಲೂಕು ಪಂಚಾಯತ್‌‌ನ ಸಭಾಂಗಣದಲ್ಲಿ ನಡೆಯಿತು.








ಈ ಸಭೆಯಲ್ಲಿ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಇಲ್ಲಿಯತನಕ ಐದು ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಸಭೆಯಲ್ಲಿ ನೀಡಿ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ಗೃಹಲಕ್ಷ್ಮೀ ಸ್ವಸಹಾಯ ಸಂಘದ ಸದಸ್ಯರು ಈ ಸಭೆಯಲ್ಲಿ ಉಪಸ್ಥಿತರಿದ್ದು ಅವರೊಂದಿಗೆ ಐದು ಗ್ಯಾರಂಟಿ ಯೋಜನೆಗಳ ಇಲಾಖೆಯ ಅಧಿಕಾರಿಗಳಿಂದ ವಿಸ್ತಾರವಾಗಿ ಮಾಹಿತಿ ಪಡೆದು ಸಾರ್ವಜನಿಕರ ಕುಂದು ಕೊರತೆಗಳ ಕುರಿತು ಚರ್ಚಿಸಿ ಯಾವ ಇಲಾಖೆಯಿಂದ ಎಷ್ಟು ಮೊತ್ತವು ಬಿಡುಗಡೆಯಾಗಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದರು.