ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು ಹಾಗೂ ಹಿರಿಯ ವಕೀಲ, ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರ ನೇತೃತ್ವದ ತಂಡವು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿತು.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಹಾಗೂ ಎ.ಎಸ್.ಎನ್. ಹೆಬ್ಬಾರ್ ಅವರ ಅಭಿಮಾನಿಗಳ ಪರವಾಗಿ ಮನವಿ ಸಲ್ಲಿಸಿ, ಅಗತ್ಯ ರಕ್ಷಣೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಕೋರಲಾಯಿತು.
ಈ ಸಂದರ್ಭದಲ್ಲಿ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಗೌರವ ಕೋಶಾಧ್ಯಕ್ಷ ಮನೋಹರ ಪಿ., ಕಾಪು ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ, ಬ್ರಹ್ಮಾವರ ತಾಲೂಕು ಕಾರ್ಯದರ್ಶಿ ಜ್ಯೋತಿ ಪೂಜಾರಿ, ಜಿಲ್ಲಾ ಪ್ರತಿನಿಧಿಗಳಾದ ಕೋ. ಚಂದ್ರಶೇಖರ ನಾವಡ, ಗಿರೀಶ ಅಡಿಗ ಹಾಗೂ ವಿಶ್ವನಾಥ ಖಾರ್ವಿ ಉಪಸ್ಥಿತರಿದ್ದರು.
ಇದೇ ಮನವಿಯನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೂ ಸಲ್ಲಿಸಿ, ಸೂಕ್ತ ರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಯಿತು.
