ಉಡುಪಿ: ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ರಾಜ್ಯೋತ್ಸವ ಪಟ್ಟಿಯಲ್ಲಿ ಘೋಷಿಸಿ,ಕೈಬಿಟ್ಟಿರುವುದು ಖಂಡನೀಯ- ನಮ್ಮ ತುಳುನಾಡ ಪರಿಷತ್


 

ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಮೊದಲ ಪಟ್ಟಿಯಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್ ಅವರ ಹೆಸರನ್ನು ಘೋಷಿಸಿ, ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ಕಾರಣ ನೀಡಿ ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ನಮ್ಮ ತುಳುನಾಡ ಪರಿಷತ್ತು ಅಸಮಾಧಾನ ವ್ಯಕ್ತಪಡಿಸಿದೆ. ಈ ತಪ್ಪನ್ನು ಸರಿಪಡಿಸದಿದ್ದಲ್ಲಿ ತುಳುನಾಡಿಗೆ ಮಾಡಿದ ಅನ್ಯಾಯದ ವಿರುದ್ದ ಮುಂದಿನ ದಿನಗಳಲ್ಲಿ ಹೋರಾಟ ನಡೆಸುದಾಗಿ ನಮ್ಮ ತುಳುನಾಡ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ರೋಹಿತ್ ಕರಂಬಳ್ಳಿ ಮತ್ತು ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.