ಉಡುಪಿ: M/S Kanchana Automobiles Pvt. Ltd, Udupi ಇದರ ಮಾಲಕ ಪ್ರಸಾದ್ ರಾಜ್ ಕಾಂಚನ್ ಇವರು ತಮ್ಮ ಸಂಸ್ಥೆಯ CSR Fund ಅಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪ್ ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಿರುತ್ತಾರೆ.
ದಿನಾಂಕ 08.10.2026 ರಂದು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪ್ರಸಾದ್ ರಾಜ್ ಕಾಂಚನ್ ರವರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಐಪಿಎಸ್ ರವರಿಗೆ ಜೀಪಿನ ಕೀ ಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಿಮ್ಮಪ್ಪ ಗೌಡ, ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಉಡುಪಿ, ರವಿ ಕುಮಾರ್, ಪೊಲೀಸ್ ನಿರೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಇವರು ಹಾಜರಿದ್ದರು.

