ಹಿಂದೂ ಕಾರ್ಯಕರ್ತ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಹಲ್ಲೆಗೈದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಇಬ್ಬರು ಆರೋಪಿಗಳು ಮದ್ಯಪ್ರದೇಶದಲ್ಲಿ ಪೊಲೀಸರ ವಶಕ್ಕೆ

 


ಉಡುಪಿ: ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ.

ಮಧ್ಯಪ್ರದೇಶದಿಂದ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಕೃತವಾಗಿ ಬಂಧಿಸಿದ ಬಳಿಕ ಆರೋಪಿಗಳ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ತಿಳಿದುಬಂದಿದೆ.