ಶ್ರೀಕೃಷ್ಣ ಮಠದ ಬಳಿ ಸಿಬ್ಬಂದಿಗಳ ನಡುವೆ ಹೊಡೆದಾಟ: ಓರ್ವನಿಗೆ ಗಾಯ



ಉಡುಪಿ, ನ. 22: ಶ್ರೀಕೃಷ್ಣ ಮಠದ ಗೀತಾ ಮಂದಿರದ ಬಳಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಹೊಡೆದಾಟಕ್ಕೆ ತಿರುಗಿದ ಘಟನೆ ರವಿವಾರ ನಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.


ತಲೆ ಹಾಗೂ ಕಾಲಿಗೆ ಗಾಯಗೊಂಡಿರುವ ವ್ಯಕ್ತಿಯನ್ನು ಅಕ್ಕಪಡೆಯ ನೆರವಿನಿಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಹೊಡೆದಾಟದಲ್ಲಿ ತೊಡಗಿದ್ದ ಇಬ್ಬರೂ ಶ್ರೀಕೃಷ್ಣ ಮಠದ ಸಿಬ್ಬಂದಿಗಳೆಂದು ಹೇಳಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.