ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ



ಉಡುಪಿ:ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ಉಡುಪಿ ಮಳಿಗೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.



ಕರ್ನಾಟಕ ರಾಜ್ಯೋತ್ಸವ ಹಾಗೂ ಮಲಬಾರ್ ದಿನದ ಅಂಗವಾಗಿ ಅಜ್ಜರಕಾಡು ಪಾರ್ಕ್‌ನಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಯಿತು.


ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಲಾಯ, ಹರೀಶ್ ಎಂ.ಜಿ., ರಾಘವೇಂದ್ರ, ಸುಧಾಕರ್, ಮಾರುಕಟ್ಟೆ ಉಸ್ತುವಾರಿ ತಂಝೀಮ್ ಶಿರ್ವ, ಗ್ರಾಹಕರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.